ಚಿಕ್ಕ-ಚಿಕ್ಕ ಮಕ್ಕಳು ಕುಡಿಯುವಂತಹ ಹಾಲಿನಿಂದ ಹಿಡಿದು, ಪ್ರತಿ ಆಹಾರವೂ ಕಲಬೆರಕೆಯಾಗುತ್ತಿದ್ದು, ಈ ರೀತಿ ಕಲಬೆರಕೆ ಮಾಡುವವರ ವಿರುದ್ಧ ಕೇಸ್ ಹಾಕಿ ಜೈಲಿಗೆ ಹಾಕಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಈ ರೀತಿಯ ಎಚ್ಚರಿಕೆ ನೀಡಿದ್ದಾರೆ.ಕಲಬುರಗಿ ನಗರದ ಜಿಲ್ಲಾ ಕೋರ್ಟ್ ರಸ್ತೆಯಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ನಲ್ಲಿ ಕಲಬುರಗಿ ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ವಾರ್ತಾ ಮತ್ತು