14 ದಿನಗಳಲ್ಲಿ ಕಬ್ಬು ಬೆಳೆಗಾರರ ಬಾಕಿ ಪಾವತಿ ಮಾಡಬೇಕು. ವಿಳಂಬವಾದರೆ ಬಡ್ಡಿ ಸಮೇತ ರೈತರಿಗೆ ಹಣ ಪಾವತಿ ಮಾಡುವಂತೆ ಸೂಚಿಸಿದ್ದು, ತಪ್ಪಿದ್ದಲ್ಲಿ ದಾಸ್ತಾನನ್ನು ವಶಕ್ಕೆ ಪಡೆಯುವ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ರೈತರು ಒಂದೆಡೆ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ದಾರಿ ಹಿಡಿಡಿದ್ದು, ಮತ್ತೊಂದೆಡೆ ಸಕ್ಕರೆ ಕಾರ್ಖಾನೆಗಳು ಕಬ್ಬಿನ ಹಣ ಪಾವತಿಸದೇ ಇರೋದು ರೈತರನ್ನ ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.ಮಂಡ್ಯ ಜಿಲ್ಲೆಯಲ್ಲಿ 5 ಕಾರ್ಖಾನೆಗಳಿದ್ದು, ಇದರಲ್ಲಿ ಒಂದು ಕಾರ್ಖಾನೆ ಮುಚ್ಚಿದೆ.