ವೀರಸ್ವರ್ಗವನ್ನು ಅಪ್ಪಿದ ಸಕ್ಕರೆ ನಾಡಿನ ಮೃತ ಯೋಧನ ಕುಟುಂಬಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಸಾಂತ್ವನ ಹೇಳಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಸಮೀಪದ ಗುಡಿಕೆರೆ ಕಾಲೋನಿಯ ಯೋಧ ಗುರು ಎಚ್ (33) ಹುತಾತ್ಮರಾಗಿದ್ದು, ಜಿಲ್ಲಾಧಿಕಾರಿ ಎನ್. ಮಂಜುಶ್ರೀ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರು ಕುಟುಂಬಕ್ಕೆ ಜಿಲ್ಲಾಡಳಿತದಿಂದ ಯಾವುದೇ ರೀತಿಯ ನೆರವಿಗೆ ಸಿದ್ಧವಿದೆ. ಕುಟುಂಬಸ್ಥರು ಧೈರ್ಯವಾಗಿರಬೇಕು ಹಾಗೆಯೇ ಹೆಚ್ಚಿನ ಆತಂಕಕ್ಕೆ ಒಳಗಾಗಬಾರದು