ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಇಲ್ಲ. ಜೂನ್ 25ರಿಂದ ಆರಂಭವಾಗುತ್ತಿರುವ ಹತ್ತನೇ ತರಗತಿ ಪರೀಕ್ಷೆಯನ್ನು ತುಮಕೂರು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ.ಒಂದು ವೇಳೆ ಪಾಸಿಟಿವ್ ಪ್ರಕರಣ ಕಂಡು ಬಂದರೆ,