ಕಬ್ಬನ್ನು ಹೊರ ರಾಜ್ಯಗಳಿಗೆ ಸರಬರಾಜು ಮಾಡಬಾರದು ಎಂದು ಜಿಲ್ಲಾಧಿಕಾರಿ ಖಡಕ್ ಸೂಚನೆ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಕಬ್ಬನ್ನು ಹೊರರಾಜ್ಯಗಳಿಗೆ ಸರಬರಾಜು ಮಾಡದೆ ಎಲ್ಲಾ ಕಬ್ಬನ್ನು ಜಿಲ್ಲೆಯ ಕಾರ್ಖಾನೆಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಕಾರ್ಖಾನೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.2019-2020 ನೇ ಸಾಲಿನ ಹಂಗಾಮಿನ ರೈತರ ಬಾಕಿ ಹಣದ ಪಾವತಿ ಬಗ್ಗೆ ಹಾಗೂ ಮೈಷುಗರ್ ವ್ಯಾಪ್ತಿಯ ಕಬ್ಬು ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಇಲಾಖಾ ಅಧಿಕಾರಿಗಳ ಸಭೆ ನಡೆಸಿದರು.ಜುಲೈ ಎರಡನೇ ವಾರದಲ್ಲೆ ಕಾರ್ಖಾನೆ ಪ್ರಾರಂಭಿಸಲು