ಚೀರ್4ಇಂಡಿಯಾ ಅಭಿಯಾನದಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಡಿಸಿಎಂ ಕರೆ

bengaluru| Geethanjali| Last Updated: ಬುಧವಾರ, 21 ಜುಲೈ 2021 (17:49 IST)
ʼಟೋಕಿಯೋ ಒಲಿಂಪಿಕ್ಸ್ʼ ಕ್ರೀಡಾಕೂಟದಲ್ಲಿನ ಭಾರತೀಯ ಸ್ಫರ್ಧಾಳುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಭಾರತೀಯ ದೈಹಿಕ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಟ್ಟದ ವೆಬಿನಾರ್‌ನಲ್ಲಿ ಭಾಗವಹಿಸಿ ಮಾತನಾಡಿದ ಅವರು, 15 ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಹಬ್ಬದಲ್ಲಿ ನಮ್ಮ ದೇಶದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಈ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಅಭಿಯಾನದ ಭಾಗವಾಗಿ ತಮ್ಮ ಸಾಮಾಜಿಕ ತಾಣದ ಖಾತೆಗಳಲ್ಲಿ ನಮ್ಮ ಕ್ರೀಡಾಪಟುಗಳಿಗೆ ಚೈತನ್ಯ, ಪ್ರೋತ್ಸಾಹ ತುಂಬುವಂಥ ಬರಹಗಳನ್ನು, ಪೋಸ್ಟ್‌ಗಳನ್ನು ಹಾಕುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಡಿಸಿಎಂ ಹೇಳಿದರು.
ಈ ವೆಬಿನಾರ್‌ನಲ್ಲಿ ರಾಜ್ಯದ ಯುವಜನ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ, ಮಾಜಿ ಒಲಿಂಪಿಕ್‌ ಕ್ರೀಡಾಪಟು ಪ್ರಮೀಳಾ ಅಯ್ಯಪ್ಪ, ಅರ್ಜುನ ಪ್ರಶಸ್ತಿ ವಿಜೇತ ಜೂಡ್ ಫೆಲಿಕ್ಸ್, ಭಾರತದ ದೈಹಿಕ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪಿಯೂಷ್ ಜೈನ್ ಮುಂತಾದವರು ಭಾಗವಹಿಸಿದ್ದರು.
ಇದರಲ್ಲಿ ಇನ್ನಷ್ಟು ಓದಿ :