ರಾಜ್ಯ ಸರಕಾರ ಅಭದ್ರವಾಗಿದೆ ಎಂದು ಅಧಿಕಾರಿಗಳು ತಮಾಷೆಯಾಗಿಯೂ ಸಹ ಚರ್ಚೆ ಮಾಡಬಾರದು. ಹೀಗಂತ ಡಿಸಿಎಂ ಹೇಳಿದ್ದಾರೆ.ಸರಕಾರವನ್ನು ಭದ್ರವಾಗಿ ಇಟ್ಟುಕೊಳ್ಳುವ ಬಗ್ಗೆ ನಾವು ನೋಡಿಕೊಳ್ಳುತ್ತೇವೆ. ಆ ವಿಷಯ ಅಧಿಕಾರಿಗಳಿಗೆ ಬೇಕಿಲ್ಲ. ಈ ಬಗ್ಗೆ ನೀವು ಚರ್ಚೆ ಮಾಡಿದರೆ ಸುಲಲಿತ ಆಡಳಿತ ನೀಡಲು ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಕರೆದಿದ್ದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನ ಸಭೆಯಲ್ಲಿ ಮಾತನಾಡಿದರು.ಸರಕಾರ