ಬೆಂಗಳೂರು : ಸಿಎಂ ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ಡಿಸಿಎಂ ಪರಮೇಶ್ವರ್ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಮುಖ್ಯಮಂತ್ರಿಗಳು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಾರಿಗಾದರೂ ಸಿಎಂ ಹೇಳಿಕೆಯಿಂದ ಮನಸ್ಸಿಗೆ ನೋವು ಆಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮದು ರೈತ ಪರ ಸರ್ಕಾರ, ಮಹಿಳೆಯರು, ರೈತರ ಪರವಾಗಿ ಸಾಕಷ್ಟು ಯೋಜನೆಗಳನ್ನು ನಾವು ಜಾರಿ ಮಾಡಿದ್ದೇವೆ. ರೈತ ವಿರೋಧಿ ನೀತಿಯನ್ನು ನಾವು ಅನುಸರಿಸಿಲ್ಲ ಎಂದು