ಮಹತ್ವದ ಬೆಳವಣಿಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತವರು ಜಿಲ್ಲೆಯ ಮೇಲೆ ಡಿಸಿಎಂ ಕಣ್ಣು ಹಾಕುತ್ತಿದ್ದಾರೆ ಅನ್ನೋ ಮಾತುಗಳು ಕೇಳಿಬರಲಾರಂಭಿಸಿವೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರು, ಬಿಡದಿ ಹೋಬಳಿಯ ಬಾಣಂದೂರನ್ನು ಪ್ರೇಕ್ಷಣೀಯ ತಾಣವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಮರುವಿನ್ಯಾಸಗೊಳಿಸುವಂತೆ ಗುತ್ತಿಗೆ ಪಡೆದಿರುವ ಖಾಸಗಿ ಸಂಸ್ಥೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚಿಸಿದ್ದಾರೆ.ಬಾಣಂದೂರನ್ನು ಸಾಂಸ್ಕೃತಿಕ ಹಾಗೂ ಪಾರಂಪರಿಕ ತಾಣವಾಗಿ ಅಭಿವೃದ್ಧಿಪಡಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆ