ಬೆಂಗಳೂರು : ಪಂಚ ಕ್ಷೇತ್ರಗಳ ಉಪಚುನಾವಣೆ ನಂತರ ಸಂಪುಟ ವಿಸ್ತರಣೆಗೆ ಮಾಡಬಹುದು ಎಂದುಕೊಂಡಿರುವ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಇದೀಗ ಡಿಸಿಎಂ ಪರಮೇಶ್ವರ್ ಅವರು ಶಾಕ್ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ಈ ತಿಂಗಳಲ್ಲೇ ಮಾಡಬೇಕು ಅನ್ನೋದು ನಮ್ಮ ಉದ್ದೇಶವಾಗಿದ್ದು, ಈ ಬಗ್ಗೆ ನಾವು ಈಗಾಗಲೇ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕೆ.ಸಿ.ವೇಣುಗೋಪಾಲ್ ಬಳಿ ಚರ್ಚೆ ನಡೆಸಿದ್ದೇವೆ, ಅವರು ರಾಹುಲ್ ಜೊತೆ ಚರ್ಚಿಸಿ ನಮಗೆ ತಿಳಿಸುತ್ತಾರೆ ಅಂತ