ಕರ್ನಾಟಕ ಶ್ರೀಗಂಧ ಮಂಡಳಿ ರಚನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ. ಸ್ಯಾಂಡಲ್ವುಡ್ ಸೊಸೈಟಿ ಆಫ್ ಇಂಡಿಯಾ ವತಿಯಿಂದ ಜೆ.ಎನ್. ಟಾಟಾ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಶ್ರೀ ಗಂಧದ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ಪ್ರಾಮುಖ್ಯತೆ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ, ಅರಣ್ಯ ಇಲಾಖೆಯು ಮಂಡಳಿ ರಚನೆ ಸಂಬಂಧ ವರದಿ ನೀಡುವಂತೆ ಸೂಚನೆನೀಡಲಾಗಿದೆ. ವರದಿ ಬಳಿಕ ಶ್ರೀಗಂಧ ಮಂಡಳಿ ರಚನೆ ಮಾಡಲಾಗುವುದು ಎಂದರು.