ಚುನಾವಣೋತ್ತರ ಸಮೀಕ್ಷೆ ಬಿಡುಗಡೆಗೊಂಡ ಬೆನ್ನಲ್ಲೇ ಕಾಂಗ್ರೆಸ್ ಸಮೀಕ್ಷೆ ವಿರುದ್ಧವೇ ತಿರುಗಿ ಬಿದ್ದಿದೆ.ಬಿಜೆಪಿ ಪರವಾದ ಫಲಿತಾಂಶ ಸಮೀಕ್ಷೆ ಅವರೇ ಹೇಳಿ ಮಾಡಿಸಿದ ರೀತಿ ವರದಿ ಇದೆ. ಆದರೆ ವಸ್ತು ಸ್ಥಿತಿಯಲ್ಲಿ ಬಿಜೆಪಿ ಸೋಲಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.ಸದಾಶಿವನಗರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 300-400 ಸೀಟು ಬರುತ್ತೆ ಎಂದು ಎಕ್ಸಿಟ್ ಪೋಲ್ ಮೂಲಕ ಹೇಳಿಸಿಕೊಂಡು ಬಿಜೆಪಿ ಸಮಾಧಾನ ಪಟ್ಟುಕೊಳ್ಳುವ ಕೆಲಸ ಮಾಡುತ್ತಿದೆ.ವಾಸ್ತವದಲ್ಲಿ ಯುಪಿಎ ಸರಕಾರ ಅಧಿಕಾರಕ್ಕೆ ಬರಲಿದೆ ಎಂಬ ಮಾಹಿತಿ