ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ತೆರೆಯಲು ಸರಕಾರ ಕಾರ್ಯಕ್ರಮ ರೂಪಿಸಿದೆ ಎಂದು ಡಿಸಿಎಂ ಹೇಳಿದ್ದಾರೆ.ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಈ ಹೇಳಿಕೆ ನೀಡಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಜ್ಞಾನ-ವಿಜ್ಞಾನ-ತಂತ್ರಜ್ಞಾನ ಮೇಳ, 6ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ಹಾಗೂ ವಿಜ್ಞಾತಂ ಪ್ರಶಸ್ತಿ ಪ್ರದಾನ ನೆರವೇರಿಸಿ ಮಾತನಾಡಿದರು.ಜಾಗತಿಕ ಮಟ್ಟದಲ್ಲಿ ಭಾರತ ದೊಡ್ಡ ಮಟ್ಟದ ಸ್ಥಾನಕ್ಕೇರಿದೆ. ಇಂಡಿಯಾ 6ನೇ ಅಣುಶಕ್ತಿ ಕೇಂದ್ರವಾಗಿ ಗುರುತಿಸಿಕೊಂಡಿದೆ. ಮಾನವ ಸಂಪನ್ಮೂಲ ಒದಗಿಸುವ ರಾಷ್ಟ್ರಗಳ