ಬೆಳೆಹಾನಿಯಿಂದ ರೈತರು ಕಂಗಾಲಾಗಿದ್ದು, ಪೂರ್ಣ ಪ್ರಮಾಣದಲ್ಲಿ ಏಕ ರೂಪದಲ್ಲಿ ಪರಿಹಾರ ನೀಡಬೇಕು. ಹೀಗಂತ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಬೆಳೆ ಪರಿಹಾರವನ್ನು ಹೆಕ್ಟೇರ್ ಹೊರತುಪಡಿಸಿ ಎಕರೆ ರೂಪದಲ್ಲಿ ನೀಡಬೇಕು. ಈ ಮೊದಲು ನಡೆದಿದ್ದ ಪ್ರತಿಭಟನೆಗಳ ಸಂದರ್ಭದಲ್ಲಿ ರೈತರ ಮೇಲೆ ದಾಖಲಿಸಿದ್ದ ಕೇಸ್ ಗಳನ್ನು ರದ್ದುಗೊಳಿಸುವಂತೆ ಒತ್ತಾಯ