ಬೆಂಗಳೂರು: ತಾವು ಸಂಚಾರ ಮಾಡುವಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದರ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ಮೇಲೆ ಡಿಸಿಎಂ ಪರಮೇಶ್ವರ್ ಕಿಡಿ ಕಾರಿದ್ದಾರೆ.ಇತ್ತೀಚೆಗೆ ಬೆಂಗಳೂರಿನ ಜನ ನಿಬಿಡ ರಸ್ತೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದಾಗ ಸಂಚಾರ ಸ್ಥಗಿತಗೊಳಿಸಿ (ಜೀರೋ ಟ್ರಾಫಿಕ್) ಡಿಸಿಎಂ ಪರಮೇಶ್ವರ್ ವಾಹನ ಹೋಗಲು ಪೊಲೀಸರು ವ್ಯವಸ್ಥೆ ಮಾಡಿದ್ದನ್ನು ಖಾಸಗಿ ವಾಹಿನಿಗಳು ವರದಿ ಮಾಡಿ ಪ್ರಶ್ನೆ ಮಾಡಿದ್ದವು.ಡಿಸಿಎಂ ಪರಮೇಶ್ವರ್ ಅವರ ಈ ಖಯಾಲಿಯಿಂದ ಹಲವರಿಗೆ ತೊಂದರೆಯಾಗುತ್ತಿದೆ ಎಂದು ಮಾಧ್ಯಮಗಳು