ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಇನ್ನು ಹೆಚ್ಚು ತಡಮಾಡಲ್ಲ. 2-3 ದಿನಗಳಲ್ಲೇ ನೇಮಕವಾದ್ರೂ ಅಚ್ಚರಿಯಿಲ್ಲ ಎಂದು ಡಿಸಿಎಂ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಕೂಡಾ ಮಾತನಾಡಿದ್ದಾರೆ. ಆಗಸ್ಟ್ 15 ರವರೆಗೆ ಉಸ್ತುವಾರಿ ಸಚಿವರ ನೇಮಕ ಮಾಡಲು ಕಾಯುವುದಿಲ್ಲ. ಆದಷ್ಟು ಬೇಗ ನೇಮಕ ನಡೆಯಲಿದೆ ಎಂದು ಅವರು ಹೇಳಿದ್ದಾರೆ.ಜಿಲ್ಲಾ