ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಬೆನ್ನಲ್ಲೇ ಬಿಜೆಪಿ ಮುಖಂಡರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.ಮಾಜಿ ಸಚಿವ ಹಾಗೂ ಬಿಜೆಪಿ ಪ್ರಭಾವಿ ಮುಖಂಡ ಬಿ.ಶ್ರೀರಾಮುಲುಗೆ ಡಿಸಿಎಂ ಹುದ್ದೆ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ಶ್ರೀರಾಮುಲುಗೆ ಡಿಸಿಎಂ ಸ್ಥಾನ ಕೈ ತಪ್ಪಿದ್ದರಿಂದಾಗಿ ಅವರ ಬೆಂಬಲಿಗರು ಪ್ರತಿಭಟನೆ ಹಾದಿ ತುಳಿದಿದ್ದಾರೆ.ಮೊಳಕಾಲ್ಮೂರು ಕ್ಷೇತ್ರದ ಹಿರೇಹಳ್ಳಿಯಲ್ಲಿ ಪ್ರತಿಭಟನೆ ನಡೆಸಿರೋ ಶ್ರೀರಾಮುಲು ಅಭಿಮಾನಿಗಳು, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ