ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಕಾಲೇಜ್ ವೊಂದಕ್ಕೆ ಉಪಮುಖ್ಯಮಂತ್ರಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರಾಮನಗರ ಜಿಲ್ಲೆಯ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ವಿಳಂಬ ಮಾಡುತ್ತಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಅವರು ತಕ್ಷಣವೇ ಸ್ಪಂದಿಸುವಂತೆ ಆಸ್ಪತ್ರೆಗೆ ಎಚ್ಚರಿಕೆ ನೀಡಿದ್ದಾರೆ.ರಾಮನಗರದಿಂದ ಆಂಬುಲೆನ್ಸ್ ನಲ್ಲಿ ಬರುವ ರೋಗಿಗಳನ್ನು ತಕ್ಷಣವೇ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು. ವಿಳಂಬ ಧೋರಣೆ ಸಹಿಸಲು ಅಸಾಧ್ಯ. ತಪ್ಪಿದಲ್ಲಿ