ಬೆಂಗಳೂರು : ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಡಿಸಿಗಳು ಹಾಗೂ ಸಿಇಒಗಳಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಡಿಸಿಗಳು, ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು, ಡಿಸಿಗಳು, ಸಿಇಒಗಳಿಗೆ ಬದ್ಧತೆಯ ಪಾಠ ಮಾಡಿದರು. ಡಿಸಿಗಳು, ಸಿಇಒಗಳು ಸರ್ಕಾರದ ಮುಖ್ಯ ಭಾಗ. ನಿಮ್ಮ ಕಾರ್ಯವೈಖರಿ ಸರ್ಕಾರದ ಹಣೆಬರಹ ನಿರ್ಧರಿಸುತ್ತದೆ.ನೀವು ಸರಿಯಾಗಿ ಕೆಲಸ ಮಾಡದಿದ್ದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದರು. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ರೆವೆನ್ಯೂ ಇನ್ಸ್ಪೆಕ್ಟರ್ಗಳು, ಪಿಡಿಒಗಳ