ವಿಜಯಪುರ : ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡದ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ವಿಜಯಪುರದಲ್ಲಿ ಕೇಳಿ ಬರುತ್ತಿದೆ.ವಿಜಯಪುರ ದರ್ಗಾರ ಜೈಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ದೇವಕಾಂತ್ ಬಿಜ್ಜರಗಿ ಹಲ್ಲೆಗೊಳಗಾದ ವ್ಯಕ್ತಿ. ಘಟನೆ ನಡೆದು ಎರಡು ದಿನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.ವಾರ್ಡ್ ನಂಬರ್ 2ರಲ್ಲಿ ಬಿಜೆಪಿ ಅಭ್ಯರ್ಥಿ ರಾಹುಲ್ ಔರಂಗಾಬಾದ್ ಸೋಲು ಹಿನ್ನೆಲೆಯಲ್ಲಿ ದೇವಕಾಂತ್ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.ಚುನಾವಣೆಯಲ್ಲಿ ಸೋತ ಬಿಜೆಪಿ