ಡೆಡ್ಲಿ ಕೊರೊನಾಕ್ಕೆ ಒಂದೇ ಜಿಲ್ಲೆಯಲ್ಲಿ 5 ಜನರ ಬಲಿ

ಕಲಬುರಗಿ| Jagadeesh| Last Modified ಶನಿವಾರ, 18 ಜುಲೈ 2020 (20:38 IST)
ಡೆಡ್ಲಿ ಕೊರೊನಾಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗತೊಡಗಿದ್ದು, ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ.

ಕಲಬುರಗಿಯಲ್ಲಿ ಹೊಸದಾಗಿ 82 ಕೊರೊನಾ ಕೇಸ್ ಪತ್ತೆಯಾಗಿದ್ದು, ಮಾರಕ್ಕೆ ರೋಗದಿಂದ ಐವರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ ಮೂಲದಿಂದ ಜಿಲ್ಲೆಗೆ ಬಂದವರಲ್ಲಿ ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದವರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2674 ಕ್ಕೆಏರಿಕೆಯಾಗಿದೆ.

124 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 940 ಸಕ್ರಿಯ ಕೇಸ್ ಗಳಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 43 ಜನರು ಕೊರೊನಾದಿಂದ ಸಾವನ್ನಪ್ಪಿದಂತಾಗಿದೆ.


ಇದರಲ್ಲಿ ಇನ್ನಷ್ಟು ಓದಿ :