ದೇಶದಲ್ಲಿಯೇ ಮಹಾಮಾರಿ ಕೊರೋನಾ ಸೊಂಕಿಗೆ ಮೊದಲ ಮೃತ ಪ್ರಕರಣ ವರದಿಯಿಂದ ಸುದ್ದಿಯಾದ ಜಿಲ್ಲೆಯಲ್ಲಿ ಇದೀಗ ಮತ್ತೆ ಸುದ್ದಿ ಹರಡುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಪೀಡಿತರು ತೀವ್ರಗತಿಯಲ್ಲಿ ಚೇತರಿಕೆ ಕಾಣುತ್ತಿದ್ದಾರೆ. ಸೋಂಕಿತರ ಪೈಕಿ ಶೇ. 66 ರಷ್ಟು ಜನ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಜೂನ್ 24ರ ವರೆಗೆ ಪತ್ತೆಯಾದ 1254 ಕೊರೋನಾ ಪೀಡಿತರ ಪೈಕಿ 829 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರಾದವರ