ಕೋಲಾರ : ವ್ಯಕ್ತಿ ಮೃತಪಟ್ಟು ಎಷ್ಟೋ ತಿಂಗಳ ನಂತರ ಅವರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ ಎಂಬ ಸಂದೇಶ, ಪ್ರಮಾಣ ಪತ್ರಗಳು ಬಂದಿರುವ ಸುದ್ದಿಗಳನ್ನು ಓದಿದ್ದೇವೆ. ಅದರೆ ಬದುಕಿರುವ ವ್ಯಕ್ತಿಗೇ ಮರಣ ಪ್ರಮಾಣ ಪತ್ರ ನೀಡಿರುವ ಅಚ್ಚರಿದಾಯಕ ಪ್ರಸಂಗ ಕೋಲಾರದಲ್ಲಿ ನಡೆದಿದೆ. ಹೌದು, ಜೀವಂತವಾಗಿರುವ ರೈತನೊಬ್ಬನಿಗೆ ಮರಣ ಪ್ರಮಾಣ ಪತ್ರ ನೀಡುವ ಮೂಲಕ ಕೋಲಾರ ಕಂದಾಯ ಇಲಾಖೆ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ.ಜಿಲ್ಲೆಯ ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್