ಬೆಳಗಾವಿ : ಕೋವಿಡ್-19 ಬಗ್ಗೆ ಜನ ಗಂಭೀರವಾಗಿ ತೆಗೆದುಕೊಳ್ಳದೇ ಇದ್ರೆ, ಸಾವಿನ ಸಂಖ್ಯೆ ತಡೆಯೋಕಾಗಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆತಂಕಪಟ್ಟಿದ್ದಾರೆ.ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಅನ್ನು ಜನ ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೇ ಸಾವಿನ ಸಂಖ್ಯೆ ತಡೆಯಲು ಆಗಲ್ಲ. ಯಾರೂ ಆತಂಕ ಪಡಬಾರದು. ಹಾಗೆಯೇ ಉಡಾಫೆ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.ಈ ಹಿಂದೆ ಪೊಲೀಸ್ ಇಲಾಖೆಯಲ್ಲೂ ಬಹಳ ಜನ ಮೃತಪಟ್ಟರು.