ಬೆಂಗಳೂರಿನ ಬಾಗಲೂರು ಮುಖ್ಯರಸ್ತೆಯಲ್ಲಿರುವ ಅಮೆಜಾನ್ ಆಫೀಸ್ ಮುಂಭಾಗದ ಕಾಲುದಾರಿಯಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಾಕ್ಸ್ ಇದ್ದಕ್ಕಿದ್ದಂತೆ ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿದೆ. ಪಾದಚಾರಿ ಮಾರ್ಗದಲ್ಲಿ ನಡೆದುಹೋಗುತ್ತಿದ್ದ ಇಬ್ಬರು ಪಾದಚಾರಿಗಳು ಈ ದುರಂತದಲ್ಲಿ ಗಾಯಗೊಂಡಿದ್ದು, ಓರ್ವ ವ್ಯಕ್ತಿ ಕೆಳಗೆ ಬಿದ್ದು ಕೈಗಳಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಅದೇ ಹಾದಿಯಲ್ಲಿ ನಡೆದುಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಕ್ಕಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಅರುಣ್ ಜಿ ಎಂಬ ಪೋಷಕರ