ಚಿತ್ರದುರ್ಗ: ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ನ್ಯಾಯಾಲಯ ಅನುಮತಿ ನೀಡಿದರೂ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ತಡೆಯಲು ಯತ್ನಿಸಿದ ಘಟನೆ ನಡೆದಿದೆ. ನಗರದ ಜಿ.ಜಿ.ಸಮುದಾಯ ಭವನದಲ್ಲಿ ವಿಚಾರ ಸಂಕಿರಣ ನಡೆಯಬೇಕಿತ್ತು. ಆದರೆ ಈ ಬಗ್ಗೆ ತಿಳಿದ ಜಿಲ್ಲಾಡಳಿತ ಹಾಗೂ ಪೊಲೀಸರು, ನ.7 ರಂದು ಬೆಳಗ್ಗೆಯಿಂದ ನ.10 ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಿತ್ತು. ಹೀಗಾಗಿ ಕಾರ್ಯಕ್ರಮಕ್ಕೆ ಅವಕಾಶ ಇರಲಿಲ್ಲ. ಸುದ್ದಿಗೋಷ್ಠಿಗೂ ಅವಕಾಶ ನೀಡಲಿಲ್ಲ. ಬಳಿಕ