ರಾಮನಗರ : ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ರಾಮನಗರದಲ್ಲಿ ನಡೆದಿದೆ.ಹುಟ್ಟೂರು ಬಿಟ್ಟುರೂ ಬೆಂಬಿಡದ ಸಾಲಗಾರ ಕಾಟಕ್ಕೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಿಂದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಜಗತ್ತನ್ನೇ ಅರಿಯದ ಮೂರು ಮುದ್ದು ಕಂದಮ್ಮಗಳು ಸೇರಿದಂತೆ 6 ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.ಮೂಲತಃ ರಾಮನಗರ ತಾಲೂಕಿನ ಕುಂಬಳಗೂಡು ನಿವಾಸಿ ರಾಜು ಕೂಲಿ ಕೆಲಸ ಮಾಡಿಕೊಂಡು ಜೀವನ