ದೇವರ ಮೇಲಿಟ್ಟಿರುವ ನಂಬಿಕೆಯನ್ನು ದುರುಪಯೋಗ ಮಾಡಿಕೊಳ್ಳುವವರ ವಂಚಕರು ರಾಜಧಾನಿಯಲ್ಲಿ ದಿನೇ ದಿನೆ ಹೆಚ್ಚಾಗುತ್ತಿದ್ದಾರೆ. ದೈವದ ಕಲ್ಲು, ಅದೃಷ್ಟದ ಕಲ್ಲು ಎಂದು ಜನರನ್ನು ನಂಬಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡಲು ಬಂದಿದ್ದ ಇಬ್ಬರು ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಷ್ಣು ರೂಪದ ಕಲ್ಲು ಎಂದು ಹೇಳಿ ರಾಜಧಾನಿಯಲ್ಲಿ ಮಾರಾಟಕ್ಕೆ ಮುಂದಾಗಿದ್ದ ಮಹಾರಾಷ್ಟ್ರ ಮೂಲದ ಮನೋಜ್ ಹಾಗೂ ಆದಿತ್ಯ ಸಾಗರ್ ಎಂಬುವರನ್ನು ಬಂಧಿಸಲಾಗಿದೆ.ಬಂಧಿತರಿಂದ ಸಾಲಿಗ್ರಾಮದ ಎರಡು ಕಲ್ಲುಗಳು ಹಾಗೂ ಕೆಲ ರಾಸಾಯನಿಕ ವಸ್ತುಗಳನ್ನು