ಮೈಸೂರು : ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದೆ. ಸಭೆಯ ಬಳಿಕ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ಸರ್ಕಾರಿ ಭವನದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುತ್ತದೆ. ಕೇಂದ್ರ ಸರ್ಕಾರ