63ನೇ ಕರ್ನಾಟಕ ರಾಜ್ಯೋತ್ಸವವನ್ನು ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು. ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ರಾಜ್ಯೋತ್ಸವ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಿ ನಗರೇಶ್ವರ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 8.30 ಗಂಟೆಗೆ ತಾಯಿ ಭುವನೇಶ್ವರಿ ಭಾವಚಿತ್ರದ ಪೂಜೆ ಹಾಗೂ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಗುವುದು ಎಂದರು. ನಾಡದೇವಿ ತಾಯಿ ಭುವನೇಶ್ವರಿ ಭಾವಚಿತ್ರದ ಬೃಹತ್