ಹಾಸನ (ಸೆ 02) : ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹಾಸನ ಜಿಲ್ಲಾಡಳಿತ ಎರಡು ವಾರಗಳ ಕಾಲ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 3ರ ಶುಕ್ರವಾರ ರಾತ್ರಿ 9 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ ಜಾರಿಗೆ ಬರಲಿದೆ. ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಎರಡು ವಾರಗಳ ವಾರಾಂತ್ಯದ ಕರ್ಫ್ಯೂ ವಿಧಿಸುವುದು ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ