ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿರುವ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ನಡೆದಿರುವ ಐಟಿ ದಾಳಿಯ ಬಗ್ಗೆ ಮಾಧ್ಯಮಗಳು ಆಧಾರವಿಲ್ಲದ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸಿ ಸಚಿವರ ಮಾನಹಾನಿಗೆ ಪ್ರಯತ್ನಿಸುತ್ತಿವೆ. ಇಂತಹ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ತಿಳಿಸಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳು ತಮ್ಮ ಮಹಜರನಲ್ಲಿ ಯಾವುದೇ ಹಣ, ಚಿನ್ನಾಭರಣ