ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ವೃತ್ತಿಯಲ್ಲಿ ವಕೀಲರಾಗಿರುವ ವಿನೋದ, ವಿಧಾನಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ. ಕಳೆದ ಜೂನ್ 27 ರಂದು ಬಿಜೆಪಿ ಮುಖಂಡ ಈಶ್ವರಪ್ಪ, ವಿನೋದ್ ವಿರುದ್ಧ ವಾಗ್ದಾಳಿ ನಡೆಸಿ ಅವರೊಬ್ಬ ಬ್ಲ್ಯಾಕ್ಮೇಲರ್. ಹಣ ಸುಲಿಯುವ ವಂಚನೆಯಲ್ಲಿ ತೊಡಗಿದ್ದಾರೆ ಎಂದು ಜರಿದಿದ್ದರು. ಇದರಿಂದ ಆಕ್ರೋಶಗೊಂಡ ವಿನೋದ್ ಶಿವಮೊಗ್ಗದ 2ನೇ