ಸಿಎಂ ವಿರುದ್ಧ ಕೈ ನಾಯಕರು ಕಿಡಿಕಿಡಿ

ಮಂಡ್ಯ, ಬುಧವಾರ, 27 ಮಾರ್ಚ್ 2019 (20:00 IST)

ಮುಖ್ಯಮಂತ್ರಿ ವಿರುದ್ಧ ಕಾಂಗ್ರೆಸ್ಸಿಗರು ಇನ್ನಿಲ್ಲದಂತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಂಡ್ಯದಲ್ಲಿ ಕಳೆದ ನಗರಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಮೊನ್ನೆಯಷ್ಟೆ ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. ಮಾತುಕತೆ ವೇಳೆ ನಿಖಿಲ್ ರನ್ನ ಬೆಂಬಲಿಸುವಂತೆ ಮನವಿ ಮಾಡಲಾಗಿದೆ.

ಮಂಡ್ಯ ನಗರದ ಕಾಂಗ್ರೆಸ್ ಜಿಲ್ಲಾ  ಖಜಾಂಚಿ ಅಶೋಕ್ ಮನೆಗೆ ಭೇಟಿ ನೀಡಿದ್ದ ವೇಳೆ ಮಾತುಕತೆ ನಡೆದಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿರುವಂತೆ ಮನವಿ ಮಾಡಲಾಗಿತ್ತು. ಆದರೆ ನಾಮಪತ್ರ ದಿನ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ನಾಯಕರ ಕಡೆಗಣನೆ ವಿರೋಧಿಸಿ ಸುಮಲತಾ ಬೆಂಬಲಿಸಲು ನಿರ್ಧಾರವನ್ನು ಕೈ ನಾಯಕರು ಮಾಡಿದ್ದಾರೆ.

ಸಿಎಂ ಅವಶ್ಯಕತೆ ಇದ್ದಾಗ ಮಾತ್ರ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ ಅಂತಾ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ನಡೆ ವಿರೋಧಿಸಿ ಅಶೋಕ ನಗರದ ಚಂದ್ರು ನಿವಾಸದಲ್ಲಿ ನಡೆದ ಸಭೆಯಲ್ಲಿ ಸುಮಲತಾ ಬೆಂಬಲಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸರಕಾರಿ ಆಸ್ಪತ್ರೆಯಲ್ಲಿ ಸೆಲ್ಫ್ ಸಿಸ್ಟ್ಂ

ಹೋಟೆಲ್ ಗಳಲ್ಲಿ ಸ್ವ ಸಹಾಯ ಪದ್ಧತಿ ಅಂತಾ ಬೋರ್ಡ್ ಇರುತ್ತದೆ. ಆದರೆ ಸರಕಾರಿ ಆಸ್ಪತ್ರೆಯಲ್ಲಿ ಸ್ವ – ...

news

ಪಾನ್ ಶಾಪ್ ಮೇಲೆ ಪೊಲೀಸರು ದಾಳಿ ನಡೆಸಿದ್ಯಾಕೆ?

ಪಾನ್ ಶಾಪ್ ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಆರೋಪಿಯೊಬ್ಬನನ್ನು ಬಂಧನ ಮಾಡಿದ್ದಾರೆ.

news

ಸುಮಲತಾ ಹೆಸರಿನ ಅಭ್ಯರ್ಥಿಗಳು ಕಣಕ್ಕೆ: ನೆಟ್ಟಿಗರು ಗರಂ

ಸುಮಲತಾ ಹೆಸರಿನ ಅಭ್ಯರ್ಥಿಗಳನ್ನು ಜೆಡಿಎಸ್ ಕಣಕ್ಕೆ ಇಳಿಸಿರುವ ತಂತ್ರಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.

news

ಮೋದಿಯನ್ನು ಹಾಡಿ ಹೊಗಳುತ್ತಿರುವ ಕೈ ಕಾರ್ಯಕರ್ತರು…!

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಕೈ ಪಾಳೆಯದ ಮುಖಂಡರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಅಚ್ಚರಿಯ ...