ದೆಹಲಿಯಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ವಿರೋಧಿಸಿ ಧಿಕ್ಕಾರ ಕೂಗಲಾಗಿದೆ. ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ಧಾರವಾಡ ನಗರದ ಕಡಪಾ ಮೈದಾನದಿಂದ ಹೊರಟ ಪ್ರತಿಭಟನಾ ರ್ಯಾಲಿಯು ವಿವೇಕಾನಂದ ವೃತ್ತವನ್ನು ಸುತ್ತು ಹಾಕಿ ಮತ್ತೆ ಕಡಪಾ ಮೈದಾನಕ್ಕೆ ತಲುಪಿತು. ದೇಶಾದ್ಯಂತ ವಿರೋಧಿಸಲ್ಪಡುತ್ತಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಮತ್ತು ಅಲಿಘರ ಮುಸ್ಲಿಂ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಕೂಡಾ ವಿರೋಧಿಸಿ ಪ್ರತಿಭಟನೆ