ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.ಭದ್ರಾವತಿಯಲ್ಲಿ ಬಿಜೆಪಿ ಮುಖಂಡನ ಮೇಲಿನ ಹಲ್ಲೆಗೆ ಸಾಮಾಜಿಕ ಜಾಲತಾಣದಲ್ಲಿ ವಿಜಯೇಂದ್ರ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ.ಭದ್ರಾವತಿಯಲ್ಲಿ ನಡೆಯುತ್ತಿರುವ ದಂಧೆಗಳಲ್ಲಿ