ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಡೆಡ್ಲಿ ಹಿಟ್ ಅಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಜಾಲಿ ರೈಡ್ ಹೊರಟ ಯುವಕ-ಯುವತಿಯರು ಅಮಾಯಕನ ಪ್ರಾಣವನ್ನು ತೆಗೆದೇ ಬಿಟ್ಟಿದ್ದಾರೆ. ಅತಿ ವೇಗದ ಮೋಜಿನ ಹುಚ್ಚಾಟಕ್ಕೆ ಕುಟುಂಬದ ಆಧಾರವಾಗಿದ್ದ ವ್ಯಕ್ತಿಯೊಬ್ಬನನ್ನು ಬಲಿ ಪಡೆದಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಆತನನ್ನು ಆಸ್ಪತ್ರೆಗೆ ದಾಖಲಿಸದೇ ಅಲ್ಲಿಯೇ ಬಿಟ್ಟು ಪರಾರಿಯಾಗುವ ಮೂಲಕ ಮೃಗಗಳಿಗಿಂತಲೂ ಕಡೆಯಾಗಿ ವರ್ತಿಸಿದ್ದಾರೆ. ಆದರೆ, ತಾನೊಂದು ಬಗೆದರೆ ದೈವವೊಂದು