ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಮಹಿಳೆಯೊಬ್ಬರನ್ನ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯುತ್ತಿದ್ದಾಗ, ಆ್ಯಂಬುಲೆನ್ಸ್ನಲ್ಲಿಯೇ ಹೆರಿಗೆಯಾದ ಘಟನೆ ನಡೆದಿದೆ.ಧಾರವಾಡ ತಾಲೂಕಿನ ಪುಡಕಲಕಟ್ಟಿ ಗ್ರಾಮದ ಈರಮ್ಮ ತರ್ಲಘಟ್ಟ (27) ಆ್ಯಂಬುಲೆನ್ಸ್ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗಿನ ಜಾವ ಈರಮ್ಮಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕುಟುಂಬಸ್ಥರು ಆ್ಯಂಬುಲೆನ್ಸ್ಗೆ ಕರೆ ಮಾಡಿದರು. ಆ್ಯಂಬುಲೆನ್ಸ್ನಲ್ಲಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ತೀವ್ರ ಹೆರಿಗೆ ನೋವು ಕಾಣಿಸಿಕೊಳ್ಳುತ್ತಿದ್ದಂತೆಯೇ ಧಾರವಾಡದ ಹೊರಭಾಗದಲ್ಲಿ ವಾಹನ ನಿಲ್ಲಿಸಿ, ಆ್ಯಂಬುಲೆನ್ಸ್ ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ.