ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿರುವ ರಾಜ್ಯಕ್ಕೆ ಈಗ ರೂಪಾಂತರಿ ತಳಿ ಡೆಲ್ಟಾ ಪ್ಲಸ್ ನ ಭೀತಿ ಆವರಿಸಿದೆ. ಮೈಸೂರಿನಲ್ಲಿ ಈಗಾಗಲೇ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.