ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆ ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಬಿಡುಗಡೆ ಮಾಡಿದ್ದು, ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್ಗೆ ನೋಟಿಸ್