ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಅವ್ಯವಹಾರ ಆಗಿದೆಯಾ? ಇಂಥದ್ದೊಂದು ಚರ್ಚೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗ್ರಾಸವೊದಗಿಸಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಅವ್ಯವಹಾರ ಭಾರಿ ಪ್ರಮಾಣದಲ್ಲಿ ಆಗಿದೆ. ಹೀಗಾಗಿ ಈ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.ರೈತರಿಗಿಂತಲೂ ಈ ಯೋಜನೆ ಖಾಸಗಿ ವಿಮಾ ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ಮೂಲಕ ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ.