ಉತ್ತರ ಕನ್ನಡದಲ್ಲಿ 2-3 ಕ್ಷೇತ್ರಗಳಲ್ಲಿ ನಾಮಧಾರಿ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ನಾಮಧಾರಿ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಮಧಾರಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಸಮುದಾಯವನ್ನು ಕಡೆಗಣಿಸದೇ ಕಾಂಗ್ರೆಸ್ ಟಿಕೆಟ್ ನೀಡುವಂತೆ ಶ್ರೀಗಳು ಒತ್ತಾಯಿಸಿದ್ದಾರೆ.. ಮಾಜಿ ಸಚಿವ R.V ದೇಶಪಾಂಡೆ ವಿರುದ್ಧ ಪ್ರಣವನಾಂದ ಸ್ವಾಮಿ ಆಕ್ರೋಶ ಹೊರಹಾಕಿದ್ದು, R.V ದೇಶಪಾಂಡೆ ರಾಜಕೀಯವಾಗಿ ಸಮುದಾಯವನ್ನ ಮುಗಿಸುವ ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ರು.