ಕೇಂದ್ರ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ.ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಬಸನಗೌಡ ಪಾಟೀಲ್ ಯತ್ನಾಳ ಅವರು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ವಿರುದ್ಧ ವಿನಾಕಾರಣ ಇಲ್ಲ ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ, ರಾಜ್ಯ ಮುಖಂಡರು ಯತ್ನಾಳ ಅವರನ್ನು ತಕ್ಷಣ ಬಿಜೆಪಿ ಪಕ್ಷದಿಂದ ಉಚ್ಛಾಟನೆ