ಆರ್ ಆರ್ ನಗರ ಬಿಎಂಟಿಸಿ ಡಿಪೋ ಮುಂದೆ ಬಿಎಂಟಿಸಿ ನೌಕರ ಹೊಳೆಬಸಪ್ಪ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತ ಹೊಳೆಬಸಪ್ಪ ಹೆಂಡತಿ ಇಬ್ಬರು ಮಕ್ಕಳೊಂದಿಗೆ ಧರಣಿ ನಡೆಸುತ್ತಿದ್ದು ಕೆಆರ್ಎಸ್ ಪಾರ್ಟಿ ಮತ್ತು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆಗೆ ಸಾಥ್ ಕೊಟ್ಟಿದ್ದಾರೆ. ನೂರಾರು ಸಂಖ್ಯೆಯಲ್ಲಿ ನೌಕರರು ಜಮಾಯಿಸಿ ಸ್ಥಳಕ್ಕೆ ಸಾರಿಗೆ ಸಚಿವರು ಬರುವಂತೆ ಪಟ್ಟು ಹಿಡಿದಿದ್ದಾರೆ. ಹಾಗೂ ಡಿಪೋ ಮ್ಯಾನೇಜರ್ ಮಲ್ಲಿಕಾರ್ಜುನಯ್ಯ ಬಂಧಿಸಬೇಕು ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.