ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮಾತ್ರ ಇರುವುದಿಲ್ಲ. ಯಾವ ಭಾಷೆಯಲ್ಲಿ ನಾನು ಮಾತನಾಡಬೇಕು ಎನ್ನುವ ಬಗ್ಗೆ ನನಗೆ ಪಾಠ ಹೇಳ್ಬೇಡಿ ಎಂದು ಜಿಲ್ಲಾಧಿಕಾರಿ ಜಯರಾಂ ಎಂಇಎಸ್ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಷಾ ರಾಜಕಾರಣ ಮಾಡಿದ ಎಂಇಎಸ್ ಮುಖಂಡರಿಗೆ ತಾಕೀತು ಮಾಡಿದ ಜಿಲ್ಲಾಧಿಕಾರಿ ಜಯರಾಮ್, ನಾನು ಕರ್ನಾಟಕ ಸರಕಾರದ ಅಧಿಕಾರಿ. ಕರ್ನಾಟಕದ ಹಿತ ಕಾಪಾಡುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಭೆಯಲ್ಲಿ