ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು