ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ನನ್ನ ಸಂಪೂರ್ಣ ಬೆಂಬಲವಿದೆ ಎಂದು ಭಾರಿ ಕೈಗಾರಿಕೆ ಖಾತೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾದಲ್ಲಿ ಏನು ತಪ್ಪು ಎಂದು ಸಚಿವ ದೇಶಪಾಂಡೆ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ನಡೆಯಲಿದೆ. ಆದ್ದರಿಂದ, ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾದಲ್ಲಿ ಉತ್ತಮ ಎಂದು ತಿಳಿಸಿದ್ದಾರೆ. ನಾನು ಸೇರಿದಂತೆ ಪ್ರತಿಯೊಬ್ಬರಿಗೆ ಮುಖ್ಯಮಂತ್ರಿಯಾಗಬೇಕು ಎನ್ನುವ ಬಯಕೆಯಿರುತ್ತದೆ. ಆದರೆ, ಕೆಲವರಿಗೆ