ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಉರುಳಿಸಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಒಳಸಂಚು ರೂಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲೇಬೇಕು ಎಂದು ಪಣ ತೊಟ್ಟಿರುವ ದೇವೇಗೌಡರು, ಕಾಂಗ್ರೆಸ್ ಪಕ್ಷದ ರೆಬಲ್ ಶಾಸಕರನ್ನು ಸೆಳೆಯುವ ಯತ್ನ ನಡೆಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಉರುಳಿಸಲು