ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಡುವ ಬಗ್ಗೆ ದೇವೇಗೌಡ, ಕುಮಾರಸ್ವಾಮಿ ನಿರ್ಧಾರವೇ ಅಂತಿಮ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಇಲ್ಲ ಎಂಬ ವಿಷಯಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆ ವಿಚಾರದಲ್ಲಿ ದೇವೇಗೌಡರು, ಕುಮಾರಸ್ವಾಮಿ ನಿರ್ಧಾರವೇ ಅಂತಿಮ. ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವೂ ಅವರೇ ತೀರ್ಮಾನ ಮಾಡ್ತಾರೆ ಎಂದರು. ಪಕ್ಷ ಏನ್ ತೀರ್ಮಾನ ಮಾಡುತ್ತೋ