ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆಗೆ ಕುಮಾರಸ್ವಾಮಿ ಗುಪ್ತ ಮಾತುಕತೆ ನಡೆಸಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ದೇವೇಗೌಡರು ಭೀಷ್ಮ ಪ್ರತಿಜ್ಞೆ ಮಾಡಿದ್ದಾರೆ.ಒಂದು ವೇಳೆ ಕುಮಾರಸ್ವಾಮಿ ನನ್ನ ಅನುಮತಿ ಇಲ್ಲದೇ ಬಿಜೆಪಿ ಜತೆಗೆ ಮೈತ್ರಿಗೆ ಮುಂದಾದರೆ ಅಪ್ಪ-ಮಗನ ಸಂಬಂಧ ಕಟ್ ಆಗುತ್ತದೆ. ಅಷ್ಟೇ ಅಲ್ಲ, ನಮ್ಮ ಕುಟುಂಬದಿಂದಲೇ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ.ಅತಂತ್ರ ಸ್ಥಿತಿ